ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಬಿಬಿಎಂಪಿ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಲಾಗಿದೆ.
ಕಚೇರಿ, ನಿವಾಸ ಸೇರಿದಂತೆ ನಗರದ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಗೋವಿಂದರಾಜ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ನಾಗರಬಾವಿ, ಗೋವಿಂದರಾಜನಗರ, ಯಲಹಂಕ ಭಾಗದಲ್ಲಿ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಹೆಚ್ಚಿನ ಮಾಹಿತಿ ಶೀಘ್ರವೇ ಅಪ್ ಡೇಟ್ ಆಗಲಿದೆ.
You Might Also Like
TAGGED:ಲೋಕಾಯುಕ್ತ