ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಹೌದು. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ. ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಸದ್ಯದಲ್ಲೇ ಜಾರಿಗೆ ತರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
You Might Also Like
TAGGED:'ಆಹಾರದ ಕಿಟ್'