HomeLatest NewsBREAKING: ರಾಜ್ಯದ ಮಾವು ಬೆಳೆಗಾರರಿಗೆ ಭರ್ಜರಿ ಗುಡ್ ನ್ಯೂಸ್: ಕೇಂದ್ರದಿಂದ ಪರಿಹಾರ ಘೋಷಣೆ: ಕ್ವಿಂಟಲ್ ಗೆ...

BREAKING: ರಾಜ್ಯದ ಮಾವು ಬೆಳೆಗಾರರಿಗೆ ಭರ್ಜರಿ ಗುಡ್ ನ್ಯೂಸ್: ಕೇಂದ್ರದಿಂದ ಪರಿಹಾರ ಘೋಷಣೆ: ಕ್ವಿಂಟಲ್ ಗೆ 1616 ರೂ. ನಿಗದಿ

ನವದೆಹಲಿ: ಕರ್ನಾಟಕ ರಾಜ್ಯದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರಕ್ಕೆ ಕೇಂದ್ರ ಕೃಷಿ ಸಚಿವರು ಸ್ಪಂದಿಸಿದ್ದಾರೆ.

2025 -26ನೇ ಸಾಲಿನ ಮಾವು ಬೆಳೆಗೆ ಪರಿಹಾರ ಘೋಷಣೆ ಮಾಡಲಾಗಿದೆ. ಪ್ರತಿ ಕ್ವಿಂಟಲ್ ಮಾವಿಗೆ 1616 ರೂಪಾಯಿ ಪರಿಹಾರ ಘೋಷಿಸಲಾಗಿದೆ.

ರಾಜ್ಯದ 2,50,000 ಮೆಟ್ರಿಕ್ ಟನ್ ಮಾವಿಗೆ ಪರಿಹಾರ ಧನ ನೀಡಲಾಗುವುದು. ಎಂಐಎಸ್ ಯೋಜನೆಯಡಿ ಪರಿಹಾರ ನೀಡಲು ಅನುಮೋದನೆ ನೀಡಲಾಗಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಮಾವು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವಂತೆ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದರು.

“ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರ್ಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ(Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ.” ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular