HomeLatest NewsSHOCKING: ಸಮವಸ್ತ್ರ ಇಲ್ಲದೆ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ

SHOCKING: ಸಮವಸ್ತ್ರ ಇಲ್ಲದೆ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ

 ಚಿಕ್ಕಮಗಳೂರು: ಸಮವಸ್ತ್ರ ಧರಿಸದೆ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ಹೆದರಿ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

13 ವರ್ಷದ ನಿವೇದಿತಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಹೇಳಲಾಗಿದೆ. ಲಿಂಗದಹಳ್ಳಿಯಲ್ಲಿ ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಗೆ ಶಾಲಾ ಸಮವಸ್ತ್ರವನ್ನು ಶಿಕ್ಷಕರು ವಿತರಿಸಿದ್ದರು. ಸೋಮವಾರದಿಂದ ಸಮವಸ್ತ್ರ ಧರಿಸಿಕೊಂಡು ಬರುವಂತೆ ಹೇಳಿದ್ದರು. ನಿವೇದಿತಾ ಪೋಷಕರು ಟೈಲರ್ ಬಳಿ ಸಮವಸ್ತ್ರ ಹೊಲಿಯಲು ಬಟ್ಟೆ ಕೊಟ್ಟಿದ್ದರು. ಆದರೆ ಟೈಲರ್ ಸಮವಸ್ತ್ರವನ್ನು ಹೊಲಿದಿರಲಿಲ್ಲ. ಸಮವಸ್ತ್ರವಿಲ್ಲದೆ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ನಿವೇದಿತಾ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular