HomeLatest NewsBIG NEWS: ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ: ಆರ್.ಅಶೋಕ್ ಬೆನ್ನಲ್ಲೇ ದೆಹಲಿಯಲ್ಲಿ ಬೀಡು ಬಿಟ್ಟ ವಿಜಯೇಂದ್ರ

BIG NEWS: ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ: ಆರ್.ಅಶೋಕ್ ಬೆನ್ನಲ್ಲೇ ದೆಹಲಿಯಲ್ಲಿ ಬೀಡು ಬಿಟ್ಟ ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದು, ಅಲ್ಲಿಯೇ ಬೀಡುಬಿಟ್ಟಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ಎರದು ದಿನಗಳಿಂದ ದೆಹಲಿಯಲ್ಲಿದ್ದು, ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ದೆಹಲಿಗೆ ತೆರಳಿದ್ದಾರೆ.

ಇಬ್ಬರು ನಾಯಕರಿಗೆ ವರಿಷ್ಠರು ಬುಲಾವ್ ನೀಡಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲಿಯೇ ನೂತನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ರಾಜ್ಯ ಬಿಜೆಪಿಯಲ್ಲಿ ಮಹತ್ವದ ವಿದ್ಯಮಾನಗಳು ನಡೆಯುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular