BREAKING : ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : ಬೆಂಗಳೂರು ಸೇರಿ ರಾಜ್ಯದ 18 ಕಡೆ E.D ದಾಳಿ.!

ಬೆಂಗಳೂರು : ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್’ ದಂಧೆ ಕೇಸ್ ಗೆ ಸಂಬಂಧಿಸಿದಂತೆ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ 18 ಕಡೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಆಕಾಶ್ ಇನ್ಸ್ಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜು ಹಾಗೂ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಸೇರಿ ರಾಜ್ಯದ 18 ಕಡೆ ಇಡಿ ದಾಳಿ ನಡೆಸಿದೆ. ರಾಜ್ಯದ ಹಲವು ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೂಡ ಇಡಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

ಇತ್ತೀಚೆಗೆ ಕಾಲೇಜುಗಳ ಸೀಟುಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಲಕ್ಷಾಂತರ ರೂ ಹಣಕ್ಕೆ ಸೀಟುಗಳನ್ನು ಅಕ್ರಮವಾಗಿ ಡೀಲ್ ಮಾಡಲಾಗುತ್ತಿತ್ತು.

ಅಭ್ಯರ್ಥಿಗಳು ಕಾಲೇಜು ಪ್ರವೇಶ ಪಡೆಯದ್ದರಿಂದ ಮುಂದಿನ ಅರ್ಹ ಅಭ್ಯರ್ಥಿಗಳಿಗೆ ಉದ್ದೇಶಪೂರ್ವಕವಾಗಿ ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಹಾಗೂ ಸರ್ಕಾರಿ ಸೀಟುಗಳ ಬದಲಿಗೆ ಮ್ಯಾನೇಜ್ ಮೆಂಟ್ ಕೋಟಾದ ಸೀಟುಗಳಾಗಿ ಪತಿವರ್ತಿಸಿ ಸರ್ಕಾರಿ ಖಾಸಗಿ ಕಾಲೇಜು ಅಭ್ಯರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದವು ಎಂಬ ಆರೋಪ ಕೇಳಿಬಂದಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read