ಬೆಂಗಳೂರು ನಗರ ಜಿಲ್ಲೆ : ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ವತಿಯಿಂದ 2025ನೇ ಸಾಲಿಗೆ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮಕ್ಕಳು 2025ರ ಜುಲೈ 31ಕ್ಕೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರಬೇಕು. ಬೆಂಗಳೂರು ದಕ್ಷಿಣ (ಕೆಂಗೇರಿ) ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ಪ್ರಶಸ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಜಾಲತಾಣ: https://awards.gov.in ವೆಬ್ ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ದಕ್ಷಿಣ (ಕೆಂಗೇರಿ), ನಂ.27/17, 2ನೇ ಮಹಡಿ, ಅಕ್ಷಯ ಸ್ಕೇರ್, 80 ಅಡಿ ವರ್ತುಲ ರಸ್ತೆ, ಪಾಪರೆಡ್ಡಿಪಾಳ್ಯ, ನಾಗರಬಾವಿ 2ನೇ ಹಂತ, ಬೆಂಗಳೂರು-72 ಅಥವಾ ದೂರವಾಣಿ: 080-23442233 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ (ಕೆಂಗೇರಿ), ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.