HomeLatest NewsBREAKING: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಅಪಘಾತದಲ್ಲಿ 20 ಪ್ರಯಾಣಿಕರಿಗೆ ಗಾಯ

BREAKING: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಅಪಘಾತದಲ್ಲಿ 20 ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 15 ರಿಂದ 20 ಪ್ರಯಾಣಿಕರು ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಬಳಿ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಗೆ ಉರುಳಿಬಿದ್ದಿದೆ. ಗದಗ ಜಿಲ್ಲೆ ಶಿರಹಟ್ಟಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದೆ. ಗಾಯಾಳು ಪ್ರಯಾಣಿಕರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular