HomeLatest News1ರಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್...

1ರಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಒಂದು ಜೊತೆ ಶೂ, ಸಾಕ್ಸ್ ಗೆ ಸರ್ಕಾರದಿಂದ ಹಣ ಬಿಡುಗಡೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳ ಶೂ ಮತ್ತು ಸಾಕ್ಸ್ ಖರೀದಿಗೆ ರಾಜ್ಯ ಸರ್ಕಾರದಿಂದ 111 ಕೋಟಿ 68 ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ.

40.68 ಲಕ್ಷ ವಿದ್ಯಾರ್ಥಿಗಳಿಗೆ ಶೂ. ಸಾಕ್ಸ್ ಗಾಗಿ ಹಣ ಬಿಡುಗಡೆ ಮಾಡಲಾಗಿದೆ. ಉಚಿತವಾಗಿ ಒಂದು ಜೊತೆ ಶೂ ಮತ್ತು ಸಾಕ್ಸ್ ಗಳನ್ನು ಖರೀದಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿಗೆ ಎಸ್.ಡಿ.ಎಂ.ಸಿ.ಗೆ ಅಧಿಕಾರ ನೀಡಲಾಗಿದೆ. ಶಿಕ್ಷಣ ಇಲಾಖೆಯಿಂದ ಈ ಕುರಿತಾಗಿ ಮಾರ್ಗಸೂಚಿ ಪ್ರಕಟಿಸಲಾಗಿದೆ.

ವಿದ್ಯಾರ್ಥಿಗಳ ಸ್ಯಾಂಡಲ್‌ ಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಸ್ಯಾಂಡಲ್‌ ಗಳನ್ನು ಸ್ಥಳೀಯವಾಗಿ ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಗೆ ವಹಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಜೊತೆ ಕಪ್ಪು ಬಣ್ಣದ ಶೂ ಗಳನ್ನು ಹಾಗೂ ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ಗಳನ್ನು ಖರೀದಿಸಿ ವಿತರಿಸುವುದು. ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ ಮತ್ತು ಸಾಕ್ಸ್ ಗಳ ಬದಲಾಗಿ ಕಪ್ಪು/ಕಂದು ಬಣ್ಣದ ಸ್ಯಾಂಡಲ್‌ಗಳನ್ನು ಖರೀದಿಸಿ ವಿತರಿಸುವುದು.

ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್ಗಳನ್ನು ಖರೀದಿಸಿ ವಿತರಿಸುವ ಪ್ರಕ್ರಿಯೆಯಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಯು ಪಾರದರ್ಶಕತೆ ಕಾಪಾಡುವುದು.

ಶೂ ಮತ್ತು ಸಾಕ್ಸ್ಗಳ ಖರೀದಿ ಪ್ರಕ್ರಿಯೆ ಪ್ರಾರಂಭಿಸುವ ಮುನ್ನ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಎಸ್.ಡಿ.ಎಂ.ಸಿ.ಯು ಕೆಳಕಂಡಂತೆ ಖರೀದಿ ಸಮಿತಿಯನ್ನು ರಚಿಸತಕ್ಕದ್ದು.

ಪ್ರತಿಯೊಂದು ತಾಲ್ಲೂಕಿನಲ್ಲಿ ಕನಿಷ್ಠ ಶೇ.5ರಷ್ಟು ಶಾಲೆಗಳಲ್ಲಿನ ಶೂ ಮತ್ತು ಸಾಕ್ಸ್ ಗುಣಮಟ್ಟವನ್ನು ಯಾದೃಚ್ಚಿಕವಾಗಿ ಪರೀಕ್ಷಿಸಲು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಒಂದು ಸಮಿತಿಯನ್ನು ರಚಿಸಲು ಕ್ರಮಕೈಗೊಳ್ಳುವುದು.

ಹಿಂದಿನ ಸಾಲುಗಳಲ್ಲಿ ಕಳಪೆ ಗುಣಮಟ್ಟದ ಮತ್ತು ನಕಲಿ ಬ್ರಾಂಡೆಡ್ ಶೂ ಮತ್ತು ಸಾಕ್ಸ್ ಸರಬರಾಜಾಗಿರುವ ಬಗ್ಗೆ ಸರ್ಕಾರದ ಹಂತದಲ್ಲಿ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಸಾಲಿನಲ್ಲಿ ಜಾಗರೂಕತೆಯಿಂದ ಪರಿಶೀಲಿಸಿ, ರಾಷ್ಟ್ರಮಟ್ಟದ ಹೆಸರಾಂತ ಕಂಪನಿಗಳ/ ಪ್ರತಿಷ್ಠಿತ ಬ್ರಾಂಡ್ ಗಳ ಅಧಿಕೃತ ಮಾರಾಟಗಾರರಿಂದ ಶೂ ಮತ್ತು ಸಾಕ್ಸ್ ಅಥವಾ ಸ್ಯಾಂಡಲ್‌ಗಳನ್ನು ಖರೀದಿಸತಕ್ಕದ್ದು. ಅನಧಿಕೃತ ಮಾರಾಟಗಾರರಿಂದ ನಕಲಿ ಬ್ರಾಂಡ್/ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಅಥವಾ ಸ್ಯಾಂಡಲ್‌ಗಳನ್ನು ಖರೀದಿಸಿರುವ ಬಗ್ಗೆ ದೂರುಗಳು ವರದಿಯಾದಲ್ಲಿ ತಪಾಸಣೆಗೆ ಒಳಪಡಿಸಿ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರು/ ಕ್ಷೇತ್ರ ಶಿಕ್ಷಣಾಧಿಕಾರಿಗಳು/ ಉಪನಿರ್ದೇಶಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಶೂ ಮತ್ತು ಸಾಕ್ಸ್‌ಗಳನ್ನು ವಿದ್ಯಾರ್ಥಿಗಳ ಹಾಜರಾತಿಯನ್ನು ಗಮನಿಸಿ, ಅದಕ್ಕೆ ತಕ್ಕಂತೆ ಎಸ್.ಡಿ.ಎಂ.ಸಿ ಅನುಮೋದಿತ ಸಮಿತಿಯು ಸ್ಥಳೀಯವಾಗಿ ಖರೀದಿಸುವುದು. ವಲಯ/ಕ್ಲಸ್ಟರ್ ಅಥವಾ ಜಿಲ್ಲಾ ಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯಡಿ ಖರೀದಿ ಪ್ರಕ್ರಿಯೆ ನಡೆಸುವುದನ್ನು ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಕೇಂದ್ರೀಕೃತ ಖರೀದಿ ಪ್ರಕ್ರಿಯೆ ನಡೆಸತಕ್ಕದ್ದಲ್ಲ.

ಶೂ ಮತ್ತು ಸಾಕ್ಸ್ ಅಥವಾ ಸ್ಯಾಂಡಲ್ ಖರೀದಿಸುವ ಶಾಲೆಗಳು/ಶಾಲಾ ಖರೀದಿ ಸಮಿತಿಯು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಹಾಗೂ ಅದರಡಿಯಲ್ಲಿ ಹೊರಡಿಸಲಾದ ನಿಯಮಗಳನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

2025-26ನೇ ಸಾಲಿನಲ್ಲಿ ಈ ಕೆಳಕಂಡ ದರದಲ್ಲಿ ಎಸ್.ಡಿ.ಎಂ.ಸಿಗಳು ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅಥವಾ ಸ್ಯಾಂಡಲ್‌ಗಳನ್ನು ಖರೀದಿಸುವುದು. ಅಗತ್ಯವಾದ ಅನುದಾನಗಳನ್ನು ಎಸ್.ಡಿ.ಎಂ.ಸಿ.ಗಳ ಜಂಟಿ ಬ್ಯಾಂಕ್ ಖಾತೆಗೆ ನೇರವಾಗಿ ರಾಜ್ಯ ಖಜಾನೆಯ ತಂತ್ರಾಂಶದ ನೇರ ನಗದು ವರ್ಗಾವಣೆ ಪ್ರಕಾರ ಬಿಡುಗಡೆ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular