HomeLatest NewsSHOCKING: ಮದುವೆಯಾಗಲು ಹುಡುಗಿ ಸಿಗದಿದ್ದಕ್ಕೆ ಬೇಸರಗೊಂಡು ಸಾವಿಗೆ ಶರಣಾದ ಯುವಕ

SHOCKING: ಮದುವೆಯಾಗಲು ಹುಡುಗಿ ಸಿಗದಿದ್ದಕ್ಕೆ ಬೇಸರಗೊಂಡು ಸಾವಿಗೆ ಶರಣಾದ ಯುವಕ

ಹಾವೇರಿ: ಮದುವೆಯಾಗಲು ಹುಡುಗಿ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅವಿನಾಶ್ ಚಾವಡಿ(29) ಮೃತಪಟ್ಟ ಯುವಕ. ಚಾಲಕನಾಗಿದ್ದ ಅವಿನಾಶ್ ಮದುವೆಯಾಗಲು ಕನ್ಯೆ ಸಿಗದಿರುವ ಕಾರಣ ಮನನೊಂದಿದ್ದ. ಊರಿನಲ್ಲಿ ತನ್ನ ವಯಸ್ಸಿನ ಎಲ್ಲ ಹುಡುಗರಿಗೆ ಹೆಣ್ಣು ಸಿಕ್ಕು ಮದುವೆಯಾಗಿದ್ದಾರೆ. ತನಗೆ ಮಾತ್ರ ಹುಡುಗಿ ಸಿಗುತ್ತಿಲ್ಲ ಎಂದು ಬೇಸರಗೊಂಡಿದ್ದ. ಇದರಿಂದ ಚಿಂತಿತನಾಗಿದ್ದ ಅವಿನಾಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular