HomeLatest Newsನಕ್ಷೆ ಇಲ್ಲದ ಕಟ್ಟಡಕ್ಕೆ ನೀರು, ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ...

ನಕ್ಷೆ ಇಲ್ಲದ ಕಟ್ಟಡಕ್ಕೆ ನೀರು, ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ಮನೆ ಕಟ್ಟುವವರಿಗೆ ಡಿಸಿಎಂ ಡಿಕೆ ಮಹತ್ವದ ಸಲಹೆ

ಬೆಂಗಳೂರು: ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣ ಪತ್ರ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಆದೇಶದಿಂದ ಜನರಿಗೆ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಸದ್ಯ ರಾಜ್ಯದಲ್ಲಿ 2.50 ಲಕ್ಷ ಜನರು ಹಳ್ಳಿಗಳು ಮತ್ತು ನಗರ ಪ್ರದೇಶಗಳಲ್ಲಿ ಕಟ್ಟಡ ನಕ್ಷೆ ಪಡೆಯದೇ ಮನೆ ಕಟ್ಟಿಕೊಂಡಿರುವ ಮಾಹಿತಿ ಇದೆ. ಅವರು ನೀರು ಮತ್ತು ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಹಾಕಿದ್ದಾರೆ. ಅವರಿಗೆಲ್ಲ ಇದೀಗ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಆದೇಶ ವಿಚಾರದಲ್ಲಿ ಸಾರ್ವಜನಿಕರಿಗೆ ಹೇಗೆ ನೆರವಾಗಬೇಕು ಎಂಬುದರ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಕಟ್ಟಡ ನಕ್ಷೆ ಇಲ್ಲದೆ ಮನೆ ನಿರ್ಮಿಸಬೇಡಿ. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆ ಸಾಹಸಕ್ಕೆ ಕೈಹಾಕಬಾರದು. ಈ ವಿಚಾರದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ್ದರೆ ಸಕ್ರಮ ಮಾಡುವುದು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular