HomeLatest NewsGOOD NEWS : ರೈತರಿಗೆ ಗುಡ್ ನ್ಯೂಸ್ : ಶೇ.50ರಷ್ಟು ರಿಯಾಯಿತಿ ದರದಲ್ಲಿ 'ಕೃಷಿ ಯಂತ್ರೋಪಕರಣ'...

GOOD NEWS : ರೈತರಿಗೆ ಗುಡ್ ನ್ಯೂಸ್ : ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಯಂತ್ರೋಪಕರಣ’ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ(2025-26) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದೆ.

ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ರೈತರು ಪಡೆದುಕೊಳ್ಳಲು ಅರ್ಜಿಯನ್ನು ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular