ಹಾವೇರಿ : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಹೌದು. ಕೊಲೆ ಆರೋಪಿಗಳಾದ ಅಶ್ರಫ್, ನಾಗರಾಜ್ ಎಂಬುವವರನ್ನು ವಶಕ್ಕೆ ಪಡೆಯಲು ಪೊಲೀಸರು ಹಾನಗಲ್ ತಾಲೂಕಿನ ಕೊಂಡೋಜಿ ಕ್ರಾಸ್ ಬಳಿ ಹೋದಾಗ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ . ಕೂಡಲೇ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ. ಗಾಯಾಳುಗಳನ್ನ ಹಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾಡಹಗಲೇ ಗುತ್ತಿಗೆದಾರರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗಂಗಿಬಾವಿ ಕ್ರಾಸ್ ನಲ್ಲಿ ನಡೆದಿತ್ತು. ಶಿವಾನಂದ್ ಕುನ್ನೂರ್ (40) ಹತ್ಯೆಯಾದ ಗುತ್ತಿಗೆದಾರ. ಬೈಕ್ ನಲಿ ಬಂದ ನಾಲ್ವರು ದುಷ್ಕರ್ಮಿಗಳು ಶಿವಾನಂದ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಹಾಡಹಗಲೇ ನಡೆದ ಗುತ್ತಿಗೆದಾರರ ಕೊಲೆಯಿಂದ ಹಾವೇರಿ ಜಿಲ್ಲೆ ಬೆಚ್ಚಿ ಬಿದ್ದಿತ್ತು. .

