HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಕೇಂದ್ರ ನಿರ್ಮಾಣ

ಬೆಂಗಳೂರು: ಪ್ರತಿ ಜಿಲ್ಲೆಯಲ್ಲಿಯೂ ಮೂರು ವರ್ಷದೊಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಶೀಘ್ರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲು ಮುಂದಾಗಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular