HomeLatest Newsಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವವರಿಗೆ ವೆರಿಫಿಕೇಶನ್ ಸ್ಲಿಪ್ ಅನ್ನು ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದ್ದು, ತಮ್ಮ ಕ್ಲೇಮ್ ಗಳಲ್ಲಿ ಲೋಪಗಳು ಆಗಿದ್ದಲ್ಲಿ ಜುಲೈ 2 ರಿಂದ 3 ದಿನಗಳ ಕಾಲ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಮೀಸಲು ಬೇಡಿಕೆಗಳಲ್ಲಿನ ಲೋಪಗಳ ತಿದ್ದುಪಡಿಗೆ ಜುಲೈ 2 ರಿಂದ 3 ದಿನಗಳ ಕಾಲ ಅವಕಾಶ ನೀಡಲಾಗುವುದು.

ಮೀಸಲಾತಿ, ಪ್ರವರ್ಗ, ಗ್ರಾಮೀಣ, ಭಾಷಾ ಅಲ್ಪಸಂಖ್ಯಾತರ ಕೋಟಾ ಮೊದಲಾದ ಮೀಸಲು ಕೋಟಾದ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದು. ಜೂನ್ 26ರಂದು ಸ್ಲಾಟ್ ಬುಕಿಂಗ್ ಗೆ ವೆಬ್ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 2 ರಿಂದ 4ರ ವರೆಗೆ ಅಭ್ಯರ್ಥಿಗಳು ಖುದ್ದು ಕೆಇಎ ಕಚೇರಿಗೆ ಬಂದೇ ದೋಷಗಳನ್ನು ಸರಿಪಡಿಸಬೇಕು. ಬರುವುದಕ್ಕೆ ಮೊದಲು ಮುಂಗಡವಾಗಿ ದಿನಾಂಕ ನಿಗದಿಪಡಿಸಿಕೊಂಡು ಬರಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular