SHOCKING: ಹಾಸನ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಒಂದೇ ತಿಂಗಳಲ್ಲಿ 30 ವರ್ಷದೊಳಗಿನ 15 ಜನ ಸಾವು

ಹಾಸನ: ಹಾಸನದ 22 ವರ್ಷದ ಯುವತಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಇದರೊಂದಿಗೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 30 ವರ್ಷದೊಳಗಿನ 15 ಜನ ಮೃತಪಟ್ಟಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ತಾಲೂಕಿನ ಕಟ್ಟಳ್ಳಿ ಮೂಲದ ಸುಪ್ರಿಯಾ(22) ಮೃತಪಟ್ಟವರು. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದ ಸುಪ್ರಿಯಾ ಮುಕ್ತ ವಿವಿಯಲ್ಲಿ ಪದವಿ ಓದುತ್ತಿದ್ದರು. ಬುಧವಾರ ಮನೆಯಲ್ಲಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದ ಅವರನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯ ಮೃತಪಟ್ಟಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 15 ಜನ ಹೃದಯಾಘಾತದಿಂದ ಮೃತಪಟ್ಟಿದ್ದು, ಆತಂಕ ಮೂಡಿಸಿದೆ. ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣ ತಾಲೂಕಿನ ಹಲವು ಕಡೆ ಯುವಕರು, ಯುವತಿಯರು ಹೃದಯಘಾತದಿಂದ ಮೃತಪಟ್ಟಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read