HomeLatest Newsಕರ್ತವ್ಯದಿಂದ ‘ಆಶಾ’ ಮಾರ್ಗದರ್ಶಕಿಯರ ಮುಕ್ತಗೊಳಿಸಿದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಕರ್ತವ್ಯದಿಂದ ‘ಆಶಾ’ ಮಾರ್ಗದರ್ಶಕಿಯರ ಮುಕ್ತಗೊಳಿಸಿದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ ಅನೇಕ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಮಾರ್ಗದರ್ಶಕಿಯರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಜೂನ್ 12ರಂದು ಹೊರಡಿಸಿದ ಆದೇಶ ರದ್ದು ಮಾಡಬೇಕೆಂದು ಕೋರಿ ಬೆಳಗಾವಿಯ ಜರಿನಾ ಬೇಗಂ ಮುಲ್ಲಣ್ಣವರ್ ಸೇರಿ 46 ಆಶಾ ಮಾರ್ಗದರ್ಶಕಿಯರು ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಪೀಠದಿಂದ ಮಧ್ಯಂತರ ಆದೇಶ ನೀಡಲಾಗಿದೆ. ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್, ರಾಜ್ಯ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ, ರಾಷ್ಟ್ರೀಯ ಆರೋಗ್ಯ ಮಿಷನ್ ಕರ್ನಾಟಕ ಮತ್ತದರ ಮುಖ್ಯ ಆಡಳಿತ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್ ವಿಚಾರಣೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular