HomeLatest Newsಮುಸ್ಲಿಂ ಸಹೋದ್ಯೋಗಿ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

ಮುಸ್ಲಿಂ ಸಹೋದ್ಯೋಗಿ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

ಕಲಬುರಗಿ: ಮುಸ್ಲಿಂ ಸಹೋದ್ಯೋಗಿ ಯುವತಿಗೆ ಬೈಕ್ ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ.

ಸಂಘತ್ರಸವಾಡಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ ಸಾಯಿ ಮಂದಿರ ಬಡಾವಣೆಯ ನಿವಾಸಿ ಬೈಲಪ್ಪ ಖ್ಯಾಸ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಒಂದೇ ಆಸ್ಪತ್ರೆಯಲ್ಲಿ ಬೈಲಪ್ಪ ಮತ್ತು ಯುವತಿ ಕೆಲಸ ಮಾಡುತ್ತಿದ್ದರು. ತುರ್ತು ಕಾರ್ಯವಿದೆ, ಡ್ರಾಪ್ ಮಾಡಿ ಎಂದು ಯುವತಿ ಹೇಳಿದ್ದರಿಂದ ಬೈಲಪ್ಪ ಡ್ರಾಪ್ ಕೊಟ್ಟಿದ್ದರು. ಈ ವೇಳೆ 20 ಮುಸ್ಲಿಂ ಯುವಕರು ಯುವತಿಯನ್ನು ಬೈಕ್ ನಿಂದ ಇಳಿಸಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಂ.ಬಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular