HomeLatest NewsSHOCKING : ಬಾಗಲಕೋಟೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕ ಸಾವು.!

SHOCKING : ಬಾಗಲಕೋಟೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕ ಸಾವು.!

ಬಾಗಲಕೋಟೆ : ಪಾಠ ಮಾಡುವ ವೇಳೆ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.

ಜಮಖಂಡಿ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕ ಗುರುಪಾದ ಹಿಪ್ಪರಗಿ (49) ಕನ್ನಡ ಪಾಠ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ.ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದ ಪದವಿ ವಿದ್ಯಾರ್ಥಿನಿ ಸುಪ್ರಿಯಾ ಮೃತಪಟ್ಟಿದ್ದಾರೆ.

ಬೆಂಗಳೂರಿನ ವಾಸವಿದ್ದ ಹಾಸನ ಮೂಲದ ಸುಪ್ರಿಯಾ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಡಿದ್ದು, ಹಾಸನದಲ್ಲಿ ಇದುವರೆಗೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಸುಪ್ರಿಯಾ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಅವರು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದರು. ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಪದವಿ ಓದುತ್ತಿದ್ದರು. ಆಕೆ ಏಕಾಏಕಿ ಕುಸಿದು ಬಿದಿದ್ದು, ಆಸ್ಪತ್ರೆಗೆ ಕರೆದೊಯ್ಯವಷ್ಟರಲ್ಲಿ ಮೃತಪಟ್ಟಿದ್ದಾಳೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular