ಜೈಪುರ : ಪಾಪಿ ತಂದೆಯೋರ್ವ ಇಬ್ಬರು ಅಪ್ರಾಪ್ರ ಪುತ್ರಿಯರ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆಘಾತಕಾರಿ ಘಟನೆ ಜೈಪುರದಲ್ಲಿ ನಡೆದಿದೆ.
ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಸುಮಾರು ಐದು ವರ್ಷಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗುರುವಾರ ವ್ಯಕ್ತಿಯೊಬ್ಬನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ . ಸಂತ್ರಸ್ತ ಬಾಲಕಿ ಮತ್ತು ಅವರ ತಾಯಿಯ ಹೇಳಿಕೆಗಳನ್ನು ದಾಖಲಿಸಿಕೊಂಡ ನಂತರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಮಾಜ ಏನು ಅನ್ನುತ್ತೋ ಎನ್ನುವ ಹಿಂಜರಿಕೆ ಮತ್ತು ಪತಿಯ ಭಯದಿಂದಾಗಿ ಮಹಿಳೆ ಪ್ರಕರಣ ದಾಖಲಿಸಲು ನಿರಾಕರಿಸಿದ್ದರು. ಎನ್ನಲಾಗಿದೆ. ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಹಿರಿಯ ಪೊಲೀಸ್ ಅಧಿಕಾರಿಗೆ ಹಸ್ತಾಂತರಿಸಲಾಗಿದೆ.
ಜೂನ್ 20 ರಂದು ಇಬ್ಬರು ಹೆಣ್ಣುಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಇಬ್ಬರೂ ಆರೋಗ್ಯವಾಗಿರಲಿಲ್ಲ. ತಾಯಿ ವೈದ್ಯರ ಬಳಿ ಕರೆದುಕೊಂಡು ಹೋಗಿ ಇಬ್ಬರೂ ಹೆಣ್ಣುಮಕ್ಕಳು ಹೊಟ್ಟೆ ನೋವು ಮತ್ತು ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ ಎಂದು ಹೇಳಿದರು. ವೈದ್ಯರು ವಿಚಾರಿಸಿದಾಗ ಸತ್ಯ ಬೆಳಕಿಗೆ ಬಂದಿತು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಅಮಿತ್ ಕುಮಾರ್ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.