ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.
ವೈದ್ಯರ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ನಗರದ ಪೆನ್ಶನ್ ಮೊಹಲ್ಲಾ ನಿವಾಸಿ ಮಂಜುನಾಥ್ (51) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮನೆಯಲ್ಲಿದ್ದಾಗ ಮಂಜುನಾಥ್ ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ವೈದ್ಯರಿಗೆ ಕರೆ ಮಾಡಿ ಅವರು ಬರುವಷ್ಟರಲ್ಲಿ ಮಂಜುನಾಥ್ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1 ತಿಂಗಳಿನಲ್ಲಿ ಹೃದಯಾಘಾತಕ್ಕೆ 15 ಜನರು ಬಲಿಯಾಗಿದ್ದಾರೆ.

