HomeLatest NewsBREAKING NEWS: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿಗೆ ಬೆಂಕಿ: ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

BREAKING NEWS: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿಗೆ ಬೆಂಕಿ: ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ದಾವಣಗೆರೆ: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ವಂದೇ ಭಾರತ್ ರೈಲಿನ ಚಕ್ರದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ವಂದೇ ಭಾರತ್ ರೈಲು ಕೆಟ್ಟು ನಿಂತಿದೆ. ಚಕ್ರಕ್ಕೆ ಬೆಂಕಿ ಹೊತ್ತಿರುವುದನ್ನು ನೋಡಿದ ಗೇಟ್ ಮ್ಯಾನ್ ಮಾಹಿತಿ ನೀಡಿದ್ದಾರೆ. ರೈಲ್ವೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ಧಾರವಾಡದಿಂದ ಬೆಂಗಳೂರಿಗೆ ಹೊರಟಿದ್ದ ರೈಲನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ.

ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

(ಸಾಂದರ್ಭಿಕ ಚಿತ್ರ)

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular