HomeLatest NewsBIG NEWS: ಜು. 1ರಿಂದ ವಿದ್ಯುತ್ ಸಂಪರ್ಕಕ್ಕೆ 'ಸ್ಮಾರ್ಟ್ ಮೀಟರ್' ಅಳವಡಿಕೆ ಕಡ್ಡಾಯ ಆದೇಶ

BIG NEWS: ಜು. 1ರಿಂದ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ ಆದೇಶ

ಬೆಂಗಳೂರು: ಜುಲೈ 1 ರಿಂದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.

ಜುಲೈ 1ರಿಂದ ಬೆಸ್ಕಾಂ ವಿದ್ಯುತ್ ಸಂಪರ್ಕದಲ್ಲಿ ಬದಲಾವಣೆಯಾಗಲಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದು, ಗ್ರಾಮಾಂತರ ಪ್ರದೇಶಕ್ಕೂ ವಿಸ್ತರಿಸಿ ಆದೇಶಿಸಲಾಗಿದೆ.

ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular