HomeLatest Newsಬಾಲಕಿ ಸಾವಿನ FSL ವರದಿ ಖಾಸಗಿ ಆಸ್ಪತ್ರೆ ಪರ ನೀಡಲು 3 ಲಕ್ಷ ರೂ. ಲಂಚ:...

ಬಾಲಕಿ ಸಾವಿನ FSL ವರದಿ ಖಾಸಗಿ ಆಸ್ಪತ್ರೆ ಪರ ನೀಡಲು 3 ಲಕ್ಷ ರೂ. ಲಂಚ: ವೈದ್ಯ ಸೇರಿ ಇಬ್ಬರು ಅರೆಸ್ಟ್

ಹಾವೇರಿ: ಬಾಲಕಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಎಫ್.ಎಸ್.ಎಲ್. ವರದಿಯನ್ನು ಖಾಸಗಿ ಆಸ್ಪತ್ರೆಯ ಪರವಾಗಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೈದ್ಯ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದು, ಎಫ್.ಎಸ್.ಎಲ್. ವರದಿಯನ್ನು ಪರವಾಗಿ ನೀಡಲು ಲಂಚ ಸ್ವೀಕರಿಸುತ್ತಿದ್ದ ನ್ಯಾಯ ವೈದ್ಯಶಾಸ್ತ್ರದ ಡಾ. ಗುರುರಾಜ ಬಿರದಾರ ಮತ್ತು ಖಾಸಗಿ ವ್ಯಕ್ತಿ ಶಂಕ್ರಯ್ಯ ಕುಲಕರ್ಣಿ ಬಲೆಗೆ ಬಿದ್ದಿದ್ದಾರೆ.

ಇವರು ಆಸ್ಪತ್ರೆಯ ಪರವಾಗಿ ಎಫ್.ಎಸ್.ಎಲ್. ವರದಿ ನೀಡಲು ವೈದ್ಯ ಮತ್ತು ಖಾಸಗಿ ವ್ಯಕ್ತಿ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಖಾಸಗಿ ಆಸ್ಪತ್ರೆ ಮುಖ್ಯಸ್ಥ ಮಲ್ಲೇಶಪ್ಪ ಮಾಸಣಗಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. 3 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಡಿವೈಎಸ್ಪಿ ಮಧುಸೂದನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular