HomeLatest NewsGOOD NEWS : 'ಪೊಲೀಸ್ ಹುದ್ದೆ' ಆಕಾಂಕ್ಷಿಗಳಿಗೆ 'CM ಸಿದ್ದರಾಮಯ್ಯ' ಭರ್ಜರಿ ಗುಡ್ ನ್ಯೂಸ್ :...

GOOD NEWS : ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ‘CM ಸಿದ್ದರಾಮಯ್ಯ’ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಶೇ. 15.64 ಹುದ್ದೆಗಳ ಭರ್ತಿ

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಶೇ. 15.64 ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡಿದರು.

  • ಕಳೆದೊಂದು ವರ್ಷದ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯ ಮೌಲ್ಯಮಾಪನ, ಇಲಾಖೆಯ ಬೇಡಿಕೆಗಳು, ಸರ್ಕಾರದ ನೆರವಿನ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ.
  • ಕಳೆದ 2 ವರ್ಷದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ, ಕೊಲೆ-ದರೋಡೆ-ಮನೆ ಗಳ್ಳತನ ಸೇರಿ ಇತರೆ ಅಪರಾಧಗಳು ಕಡಿಮೆ ಆಗಿರುವುದನ್ನು ಇಲಾಖೆ ಕೊಟ್ಟಿರುವ ಅಂಕಿ ಅಂಶಗಳಿಂದ ಕಂಡಿದೆ.
    ಆದರೆ, ಆರೋಪ ಪಟ್ಟಿಯನ್ನು ಸೂಕ್ತ ಸಮಯಕ್ಕೆ ಸಲ್ಲಿಸುವ ಜೊತೆಗೆ ಎಫ್.ಐ.ಆರ್ ಅನ್ನು ತಕ್ಷಣ ದಾಖಲಿಸಬೇಕು, ತನಿಖೆಯ ಗುಣಮಟ್ಟ ಹೆಚ್ಚಿಸಬೇಕು ಎಂದು ಸೂಚಿಸಿದ್ದೇನೆ.
  • ಅಪರಾಧಿಗಳನ್ನು ಕ್ಷಿಪ್ರವಾಗಿ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದರೆ, ಇವುಗಳ ಪತ್ತೆಯ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ತನಿಖೆಯ ಗುಣಮಟ್ಟ ಹೆಚ್ಚಿಸುವ ಸೂಚನೆ ನೀಡಿದ್ದೇನೆ.
  • ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಚೇರಿಗಳಲ್ಲೇ ಕುಳಿತಿರಬಾರದು ಎಂದು ಸೂಚಿಸಿದ್ದೇನೆ.
  • ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಅಗತ್ಯ ಎಲ್ಲಾ ಕ್ರಮ ಕೈಗೊಳ್ಳಬೇಕು. ಡ್ರಗ್ ಮಾರುವವರ ಅಂಗಡಿ, ಅಗತ್ಯ ಬಿದ್ದರೆ ವ್ಯಾಪಾರದ ಲೈಸೆನ್ಸ್ ರದ್ದುಗೊಳಿಸುವಂತೆ ಹೇಳಿದ್ದೇನೆ.
  • ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ 15.64% ಹುದ್ದೆಗಳನ್ನು , ಒಳ ಮೀಸಲಾತಿ ಜಾರಿ ಬಳಿಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದೇನೆ.
  • ಪ್ರಚೋದನೆ, ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕೇಸು ಕಡ್ಡಾಯವಾಗಿ ದಾಖಲಿಸಿ. ಈ ಬಗ್ಗೆ ದೂರು ಬಂದ ತಕ್ಷಣ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೇನೆ.
  • ಪೊಲೀಸ್ ಗಸ್ತು ಹೆಚ್ಚಿಸಬೇಕು. ರೈತರು, ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ವಿರುದ್ಧ ದೌರ್ಜನ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದೇನೆ.
  • ಬಾಲ್ಯವಿವಾಹ, ಪೋಕ್ಸೋ, ಅತ್ಯಾಚಾರ, ಭ್ರೂಣಹತ್ಯೆಗಳನ್ನು ನೂರಕ್ಕೆ ನೂರು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜೊತೆ ಸೇರಿ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪೊಲೀಸ್ ಇಲಾಖೆಗೆ ಅಗತ್ಯವಾದ ಸವಲತ್ತುಗಳನ್ನು ಒದಗಿಸಲಾಗುವುದು ಎಂಬ ಭರವಸೆಯನ್ನು ನೀಡಲಾಗಿದ್ದು, ಯಾವುದೇ ಪ್ರಕರಣದ ತನಿಖೆಯಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ಹೇಳಿದ್ದೇನೆ ಎಂದರು.
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular