GOOD NEWS : ಪ್ರಧಾನಮಂತ್ರಿ ಆವಾಸ್ 2.0 ಯೋಜನೆಯಡಿ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ವರ್ಗ, ಸ್ವಚ್ಚತಾ ಕಾರ್ಮಿಕರು, ಪಿಎಂ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪ್ಯಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಅರ್ಜಿ ಸಲ್ಲಿಸಬಹುದು. . ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

*ಬೇಕಾದ ದಾಖಲೆ

ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿರುವಂತೆ) ಮತ್ತು ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು. ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಭAದಿಸಿದ ದಾಖಲೆಗಳು (ಹಕ್ಕು ಪತ್ರ, ಕ್ರಯ ಪತ, ದಾನ ಪತ್ರ, ಉಡುಗೋರೆ ಪತ್ರ, ಖಾತಾ ನಕಲು ಫಾರಂ-3).

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆ ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ).

ಅವಧಿ ಮೀರಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಾರ್ಯಾಲಯ ಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read