HomeLatest Newsಶಾಲೆಗಳಲ್ಲಿ ಬಿಸಿಯೂಟ, ಪೌಷ್ಟಿಕ ಆಹಾರ ವಿತರಣೆಗೆ ಬೇರೆ ಸಿಬ್ಬಂದಿ ನೇಮಿಸಿ ಶಿಕ್ಷಕರಿಗೆ ಪಾಠ ಮಾಡಲು ಅವಕಾಶ...

ಶಾಲೆಗಳಲ್ಲಿ ಬಿಸಿಯೂಟ, ಪೌಷ್ಟಿಕ ಆಹಾರ ವಿತರಣೆಗೆ ಬೇರೆ ಸಿಬ್ಬಂದಿ ನೇಮಿಸಿ ಶಿಕ್ಷಕರಿಗೆ ಪಾಠ ಮಾಡಲು ಅವಕಾಶ ಕೊಡಿ: ಸರ್ಕಾರಕ್ಕೆ ಸಭಾಪತಿ ಹೊರಟ್ಟಿ ಸಲಹೆ

ಬೆಂಗಳೂರು: ಶಾಲೆಗಳಲ್ಲಿ ಬಿಸಿಯೂಟ, ಪೌಷ್ಟಿಕ ಆಹಾರ ವಿತರಣೆಗೆ ಬೇರೆ ಸಿಬ್ಬಂದಿ ನೇಮಕ ಮಾಡಬೇಕು. ಶಿಕ್ಷಕರಿಗೆ ಬೋಧಿಸಲು ಮುಕ್ತ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸಲಹೆ ನೀಡಿದ್ದಾರೆ.

ಈ ಕುರಿತಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಆಡಳಿತಾತ್ಮಕ ಕಾರ್ಯಗಳ ಜೊತೆಗೆ ಬಿಸಿಯೂಟ ಕಾರ್ಯಕ್ರಮ ಅನುಷ್ಠಾನದ ಹೊರೆಯಿಂದ ಶಿಕ್ಷಕರು ಮಾನಸಿಕ ಒತ್ತಡಕ್ಕೆ ಒಳಗಾಗಿ ಸರಿಯಾಗಿ ಪಾಠ ಮಾಡುತ್ತಿಲ್ಲ ಎಂಬುದು ಅನೇಕ ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ. ಶೈಕ್ಷಣಿಕ ಗುಣಮಟ್ಟ ಫಲಿತಾಂಶ ಸುಧಾರಣೆಗೆ ಒತ್ತಡ ಹೇರಲಾಗುತ್ತದೆ. ಇನ್ನೊಂದಡೆ ನಿತ್ಯ ಹಾಜರಾತಿ, ಹಾಲು, ಬಾಳೆಹಣ್ಣು ವಿತರಣೆ, ಬಿಸಿಯೂಟ, ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಲು ಹೇಳಲಾಗುತ್ತದೆ. ಇದರಿಂದಾಗಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಬೇರೆ ಕೆಲಸವನ್ನೇ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಶಿಕ್ಷಕರು ಬೋಧನೆ ಕಡೆ ಗಮನ ಕೇಂದ್ರೀಕರಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು, ಸರ್ಕಾರದ ಈ ದ್ವಿಮುಖ ನೀತಿಯಿಂದ ಕೆಲವು ಶಿಕ್ಷಕರು ತಾಂತ್ರಿಕವಾಗಿ ಸಶಕ್ತರಲ್ಲದ ಕಾರಣಕ್ಕೆ ಒತ್ತಡಕ್ಕೆ ಒಳಗಾಗಿ ಅನೇಕ ರೀತಿ ಆರೋಗ್ಯ ಸಂಬಂಧಿ ತೊಂದರೆ ಅನುಭವಿಸುತ್ತಿದ್ದಾರೆ. ಪ್ರತ್ಯೇಕ ಸಿಬ್ಬಂದಿ ನೇಮಕಕ್ಕೆ ಹಣಕಾಸಿನ ಸಮಸ್ಯೆ ಮುಂದೆ ಮಾಡಿದರೆ ಮಕ್ಕಳ ಜೀವನವೂ ಹಾಳಾಗುತ್ತದೆ ಎಂದು ಸಭಾಪತಿ ಹೊರಟ್ಟಿ ಎಚ್ಚರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular