ಮೈಸೂರು : ಮೈಸೂರು ದಸರಾ ಆಚರಣೆ ಕುರಿತು ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ಕರೆದಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು ಹಾಜರಿರಲಿದ್ದಾರೆ.
ಈ ವರ್ಷ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯಲಿದೆ ಎಂಬುದು ವಿಶೇಷ. ಇದು ಮೈಸೂರು ದಸರಾದ 400 ವರ್ಷಗಳ ಇತಿಹಾಸದಲ್ಲಿಯೇ ಇದೇ ಮೊದಲು. ಪಂಚಾಂಗದ ತಿಥಿಗಳ ಪ್ರಕಾರ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಅಂದ್ರೆ 11 ದಿನಗಳ ಕಾಲ ದಸರಾ ಉತ್ಸವ ನಡೆಯಲಿದೆ. ಸೆ. 24ರಂದು ಬರುವ ಪಂಚಮಿ ತಿಥಿ 25ಕ್ಕೂ ಮುಂದುವರೆದಿರುವ ಕಾರಣ ದಸರಾ ಮಹೋತ್ಸವ 11 ದಿನ ನಡೆಯಲಿದೆ.
TAGGED:ಮೈಸೂರು ದಸರಾ