ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ.
ನಾಲ್ಕರಿಂದ ಐದು ವರ್ಷದ ಹೆಣ್ಣು ಹುಲಿಯ ಕಳೇಬರ ಗುಂಡ್ರೆ ಅರಣ್ಯದಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಹುಲಿಯ ಮೃತದೇಹ ಕಂಡು ಬಂದಿದೆ. ಇದು ಸಹಜವಾಗಿ ಮೃತಪಟ್ಟಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಅಸಹಜ ಸಾವಿಗೆ ವಿಷ ಪ್ರಾಶನವೇ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.