HomeLatest NewsKSRTC ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್: ಮಹಿಳೆಗೆ ಗಂಭೀರ...

KSRTC ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್: ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆಡಿರುವ ಘಟನೆ ಬೆಂಗಳೂರಿನ ಎಸ್.ಆರ್.ಎಸ್ ಸಿಗ್ನಲ್ ನಲ್ಲಿ ನಡೆದಿದೆ.

ಸಿಗ್ನಲ್ ನಲ್ಲಿ ಟೆಂಪೋ ಅಡ್ಡ ಬಂದಿದ್ದು, ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಓರ್ವ ಮಹಿಳೆಯ ಕಾಲಿಗೆ ಗಂಭೀರವಾದ ಗಾಯಗಳಾಗಿವೆ. ಉಳಿದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ.

ಬಸ್ ನಲ್ಲಿ ಸುಮಾರು 45 ಜನರಿದ್ದರು. ಇಂದು ಮುಂಜಾನೆ ಈ ಘಟನೆ ನಡೆದಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್ ನುಜ್ಜುಗುಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular