HomeLatest NewsBREAKING : ಈ ಬಾರಿ 11 ದಿನ ವಿಜೃಂಭಣೆಯಿಂದ 'ಮೈಸೂರು ದಸರಾ' ಆಚರಿಸಲು ನಿರ್ಧಾರ :...

BREAKING : ಈ ಬಾರಿ 11 ದಿನ ವಿಜೃಂಭಣೆಯಿಂದ ‘ಮೈಸೂರು ದಸರಾ’ ಆಚರಿಸಲು ನಿರ್ಧಾರ : CM ಸಿದ್ದರಾಮಯ್ಯ ಘೋಷಣೆ

ಮೈಸೂರು : ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ, ಸಮಾಲೋಚನೆ ನಡೆಸಿದರು.

ಈ ಬಾರಿ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿದೆ.  ಅಧಿಕ ಪಂಚಮಿ ಬಂದಿರುವುದರಿಂದ 9 ದಿನದ ಬದಲು ಅದ್ದೂರಿಯಾಗಿ 11 ದಸರಾ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಈ ಹಿಂದೆಯೂ 11 ದಿನಗಳ ಕಾಲ ದಸರಾ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ಕೆ.ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಶಾಸಕರಾದ ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಡಾ.ಯತೀಂದ್ರ ಎಸ್, ಡಾ.ಡಿ.ತಿಮ್ಮಯ್ಯ, ಅನಿಲ್ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಅಯೂಬ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular