ಚಿತ್ರದುರ್ಗ : ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ಥಾಪಿಸಿರುವ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ರಾಗಿ ಬಿಸ್ಕತ್, ಕೊಬ್ಬರಿ ಬಿಸ್ಕತ್, ಮಸಾಲ ಬಿಸ್ಕತ್, ಸಿರಿಧಾನ್ಯಗಳ ಬಿಸ್ಕತ್ ಹಾಗೂ ಇನ್ನಿತರ ಬಿಸ್ಕತ್‍ಗಳ ತಯಾರಿಕೆಯ ಬಗ್ಗೆ ಜುಲೈ 15ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಛೆಯುಳ್ಳವರು ತರಬೇತಿ ಶುಲ್ಕ ಒಟ್ಟು ರೂ. 250/-ಗಳನ್ನು ಪಾವತಿಸಿ ಜುಲೈ 12ರೊಳಗಾಗಿ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಡಾ. ಸರಸ್ವತಿ ಜೆ.ಎಂ., (ಗೃಹ ವಿಜ್ಞಾನಿ), ಕೃಷಿ ವಿಜ್ಞಾನ ಕೇಂದ್ರ, ಬಬ್ಬೂರು ಫಾರಂ, ಹಿರಿಯೂರು ಅವರ ಮೊಬೈಲ್ ಸಂಖ್ಯೆ 9986647124 ಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಬಹುದಾಗಿದೆ. ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
TAGGED:ಬೇಕರಿ ಉತ್ಪನ್ನ