HomeLatest Newsರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಮನೆ ಬಾಗಿಲಿಗೆ ತಾಜಾ ಹಣ್ಣು,...

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಮನೆ ಬಾಗಿಲಿಗೆ ತಾಜಾ ಹಣ್ಣು, ತರಕಾರಿ

ಬೆಂಗಳೂರು: ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಹಾಪ್ ಕಾಮ್ಸ್ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ನಗರದ ಅಪಾರ್ಟ್ಮೆಂಟ್ ಗಳಲ್ಲಿ ಮೊಬೈಲ್ ವಾಹನಗಳ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ಯೋಜನೆ ರೂಪಿಸಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಾಪ್ ಕಾಮ್ಸ್ ಆಧುನಿಕ ಮಳಿಗೆಗಳು, ಸಂಚಾರಿ ಮೊಬೈಲ್ ಗಳನ್ನು ವಾಹನಗಳ ಮೂಲಕ ಅಪಾರ್ಟ್ಮೆಂಟ್ ಗಳಿಗೆ ಭೇಟಿ ನೀಡಿ ತರಕಾರಿ, ಹಣ್ಣು ಮಾರಾಟ ಮಾಡುತ್ತಿದೆ. ಸಿಬ್ಬಂದಿ ಕೊರತೆಯ ಕಾರಣ ಎಲ್ಲಾ ಅಪಾರ್ಟ್ಮೆಂಟ್ ಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಖಾಸಗಿ ಸಹಭಾಗಿತ್ವದಲ್ಲಿ ಸಂಚಾರಿ ಮೊಬೈಲ್ ವಾಹನಗಳ ಮೂಲಕ ತರಕಾರಿ, ಹಣ್ಣು ಮಾರಾಟಕ್ಕೆ ಯೋಜನೆ ರೂಪಿಸಲಾಗಿದೆ.

ಯುವಕರು ಸ್ವಾವಲಂಬಿಗಳಾಗಲು ಅವಕಾಶ ಕಲ್ಪಿಸಲಾಗುತ್ತದೆ. ಆಸಕ್ತರಿಗೆ ಹಣ್ಣು ಮತ್ತು ತರಕಾರಿ ಪೂರೈಕೆ ಜೊತೆಗೆ ಸಂಚಾರಿ ವಾಹನ ನೀಡಲಾಗುವುದು. ಯುವಕರ ಬಳಿ ವಾಹನ ಇದ್ದಲ್ಲಿ ಅದಕ್ಕೆ ಬಾಡಿಗೆ ಪಾವತಿಸಲಾಗುವುದು. ಹಾಪ್ ಕಾಮ್ಸ್ ನಿಗದಿಪಡಿಸಿದ ದರದಲ್ಲಿಯೇ ಹಣ್ಣು, ತರಕಾರಿ ಮಾರಾಟ ಮಾಡಲು ತಿಳಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular