ಶಿವಮೊಗ್ಗ: ಹಸುವಿನ ಕೆಚ್ಚಲನ್ನು ಕೊಯ್ದು ಕ್ರೌರ್ಯ ಮೆರೆದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಇಂಹ ಘಟನೆ ಹೆಚ್ಚುತ್ತಿದ್ದು, ಆತಂಕ ಮೂಡಿಸಿದೆ.
ಶಿವಮೊಗ್ಗದ ಹೊಸನಗರ ತಾಲೂಕಿನ ವಿಜಾಪುರದಲ್ಲಿ ಮೇವಿಗೆ ಬಿಟ್ಟಿದ್ದ ಹಸುವಿನ ಕೆಚ್ಚಲನ್ನೇ ದುಷ್ಕರ್ಮಿಗಳು ಕೊಯ್ದು ವಿಕೃತಿ ಮೆರೆದಿದ್ದಾರೆ. ವಿಜಯ್ ಕುಮಾರ್ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ತೀವ್ರ ರಕ್ತಸ್ರಾವದಿಂದ ಹಸು ನರಳಾಡಿದೆ. ಸದ್ಯ ಹಸುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.