HomeLatest News4 ದಿನದಿಂದ ಫಾರೆಸ್ಟ್ ಗಾರ್ಡ್ ನಿಗೂಢ ನಾಪತ್ತೆ: ಪೊಲೀಸರು, ಅರಣ್ಯ ಸಿಬ್ಬಂದಿ ಹುಡುಕಾಟ

4 ದಿನದಿಂದ ಫಾರೆಸ್ಟ್ ಗಾರ್ಡ್ ನಿಗೂಢ ನಾಪತ್ತೆ: ಪೊಲೀಸರು, ಅರಣ್ಯ ಸಿಬ್ಬಂದಿ ಹುಡುಕಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿದ್ದಾರೆ.

ಶರತ್(33) ನಾಪತ್ತೆಯಾದವರು. ಕಳೆದ 4 ದಿನಗಳಿಂದ ನಾಪತ್ತೆಯಾಗಿರುವ ಫಾರೆಸ್ಟ್ ಗಾರ್ಡ್ ಶರತ್ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಾಪತ್ತೆಯಾದ ಶರತ್ ಮೂಲತಃ ಕೊಡಗು ಜಿಲ್ಲೆಯ ಆಲೂರು ನಿವಾಸಿಯಾಗಿದ್ದಾರೆ. ಸಖರಾಯಪಟ್ಟಣದ ನೀಲಗಿರಿ ತೋಪಿನಲ್ಲಿ ಶರತ್ ಗಾಗಿ ಹುಡುಕಾಟ ನಡೆಸಲಾಗಿದೆ. ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಶರತ್ ಗಾಗಿ ಹುಡುಕಾಟ ನಡೆಸಿದ್ದಾರೆ.

ಕೊಡಗಿನಿಂದ 3-4 ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular