HomeLatest Newsಬಿಜೆಪಿ ಬಿಟ್ಟು ಎಲ್ಲಿ ಹೋಗಲಿ..? ನನ್ನ ಜೀವ ಇರೋದೇ ಬಿಜೆಪಿಯಲ್ಲಿ: ವಾಪಸ್ ಪಕ್ಷ ಸೇರುವ ಇಂಗಿತ...

ಬಿಜೆಪಿ ಬಿಟ್ಟು ಎಲ್ಲಿ ಹೋಗಲಿ..? ನನ್ನ ಜೀವ ಇರೋದೇ ಬಿಜೆಪಿಯಲ್ಲಿ: ವಾಪಸ್ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ

ಬಳ್ಳಾರಿ: ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಬೆಂಗಳೂರಿನಲ್ಲಿ ನಿನ್ನೆ ಬಿಜೆಪಿ ಕುರುಬ ಸಮಾಜದ ಮುಖಂಡರ ಸಭೆ ನಡೆದಿದೆ. ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ ಅವರು ಮಾತನಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ವಾಪಸ್ ಬಿಜೆಪಿ ಸೇರ್ಪಡೆ ಆಗ್ತೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಬಿಜೆಪಿಯನ್ನು ಬಿಟ್ಟು ನಾನೆಲ್ಲಿ ಹೋಗಲಿ? ನನ್ನ ಜೀವ ಇರುವುದೇ ಬಿಜೆಪಿಯಲ್ಲಿ ಎಂದು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕೆಲವು ಹಿರಿಯರು ಚರ್ಚೆ ಮಾಡಿದ್ದಾರೆ ಎಂದು ಗೊತ್ತಾಗಿದೆ. ನೋಡೋಣ, ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ಹಿರಿಯ ನಾಯಕರು ಕುಳಿತು ಚರ್ಚೆ ಮಾಡೋಣ ಎಂದು ಹೇಳಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಶ್ವರಪ್ಪ ಅವರನ್ನು ಬಿಜೆಪಿಗೆ ಕರೆ ತರಲು ಹೆಚ್ಚಿನ ಒತ್ತಡವಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಬೇರೆ ಪಕ್ಷಗಳಿಂದಲೂ ಆಫರ್ ಬಂದಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಕರೆದಿದ್ದರು. ಸಿದ್ದರಾಮಯ್ಯ ಸಂಪುಟದ ಸಚಿವರು ಕೂಡ ನನ್ನನ್ನು ಕರೆದಿದ್ದರು. ನಾನು, ಯಡಿಯೂರಪ್ಪ, ಅನಂತ್ ಕುಮಾರ್ ಸೇರಿ ಪಕ್ಷ ಕಟ್ಟಿದ್ದೇವೆ. ಅದಕ್ಕಿಂತ ಮೊದಲು ಅನೇಕರು ಪಕ್ಷಕ್ಕಾಗಿ ರಕ್ತ ಸುರಿಸಿದ್ದಾರೆ. ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ವಾಪಸ್ ಪಕ್ಷ ಸೇರುವ ಬಗ್ಗೆ ಈಶ್ವರಪ್ಪ ಇಂಗಿತ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular