BREAKING: ಯುಟರ್ನ್ ವೇಳೆ ಕ್ಯಾಂಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಗಿಬಂಡಿ ರೆಸ್ಟೋರೆಂಟ್ ಸಮೀಪ ಯೂಟರ್ನ್ ತೆಗೆದುಕೊಳ್ಳುವಾಗ ಕಾರ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೋಸ್ಟ್ ನ ಸಿಬೇಗೌಡ(48), ಅವರ ಪತ್ನಿ ಶೋಭಾ(42), ಮಕ್ಕಳಾದ ದುಂಬಿಶ್ರೀ(16), ಭಾನುಕಿರಣ್ ಗೌಡ(14) ಮೃತಪಟ್ಟವರು.

ಕಾರ್ ಯುಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read