ಬೆಂಗಳೂರು: ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮವನ್ನು ಈ ವರ್ಷವೂ ಮುಂದುವರಿಸಲು ಸರ್ಕಾರ ಆದೇಶಿಸಿದೆ.
ಯೋಜನೆಗೆ ಸಂಬಂಧಿಸಿದ ಎಲ್ಲಾ ಖರ್ಚು ವೆಚ್ಚಗಳನ್ನು ಕೌಶಲ್ಯಾಭಿವೃದ್ಧಿ ನಿಗಮ ಭರಿಸಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಯೋಜನೆಯ ಮೊದಲ ಹಂತದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯ, ರಾಯಚೂರು ವಿಶ್ವವಿದ್ಯಾಲಯ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸೇರಿದಂತೆ 78 ಕಾಲೇಜುಗಳ 19,526 ವಿದ್ಯಾರ್ಥಿಗಳಿಗೆ ಕೌಶಲ್ಯ ಶಿಕ್ಷಣ ನೀಡಲಾಗುವುದು.
ಯೋಜನೆಯ ಎರಡನೇ ಹಂತದಲ್ಲಿ ತುಮಕೂರು ವಿವಿ, ದಾವಣಗೆರೆ ವಿವಿ, ಬೆಂಗಳೂರು ಉತ್ತರ ವಿವಿ, ಕರ್ನಾಟಕ ಅಕ್ಕ ಮಹಾದೇವಿ ಮಹಿಳಾ ವಿವಿಗಳು ಮತ್ತು ಅವುಗಳ ಸಂಯೋಜನೆಯ 90 ಕಾಲೇಜುಗಳ 17,871 ವಿದ್ಯಾರ್ಥಿಗಳಿಗೆ ಕೌಶಲ್ಯ ಶಿಕ್ಷಣ ನೀಡಲಾಗುವುದು ಎಂದು ಹೇಳಲಾಗಿದೆ.