ಬೆಂಗಳೂರು: ಸಂವಿಧಾನದಿಂದ ಜಾತ್ಯತೀತ ಪದ ತೆಗೆಯುವ ಕುರಿತಂತೆ ಹೇಳಿಕೆ ನೀಡಿದ RSS ನಾಯಕ ದತ್ತಾತ್ರೇಯ ಹೊಸಬಾಳೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.
ಭಾರತೀಯ ಯುವ ಕಾಂಗ್ರೆಸ್ ಕರ್ನಾಟಕ ಕಾನೂನು ಕೋಶದ ಸದಸ್ಯರು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
.ಜೂನ್ 26, 2025 ರಂದು, ತುರ್ತು ಪರಿಸ್ಥಿತಿಯನ್ನು ಸ್ಮರಿಸುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಹೊಸಬಾಳೆ ಅವರು ಸಂವಿಧಾನದ ಪೀಠಿಕೆಯಲ್ಲಿರುವ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಮರುಪರಿಶೀಲಿಸಿ ತೆಗೆದುಹಾಕಬೇಕು ಎಂದು ಬಹಿರಂಗವಾಗಿ ಹೇಳಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ದಾಖಲಿಸಲಾಗಿದೆ.