HomeLatest NewsBREAKING: ಅಧಿಕಾರಕ್ಕಾಗಿ ಹೊರಗಿನಿಂದ ಬಂದ ಸೋಮಣ್ಣರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಆತ್ಮಹತ್ಯೆ: ಪಕ್ಷದ ಹಿರಿಯ...

BREAKING: ಅಧಿಕಾರಕ್ಕಾಗಿ ಹೊರಗಿನಿಂದ ಬಂದ ಸೋಮಣ್ಣರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಆತ್ಮಹತ್ಯೆ: ಪಕ್ಷದ ಹಿರಿಯ ಮುಖಂಡ ತೋಟದಪ್ಪ ಬಸವರಾಜ್ ಬೆದರಿಕೆ

ಮೈಸೂರು: ವಿ. ಸೋಮಣ್ಣರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಕ್ಕಾಗಿ ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಬಿಜೆಪಿಗಾಗಿ ದುಡಿದ ಕಾರ್ಯಕರ್ತರಿಗೆ ಅಪಮಾನ ಮಾಡಿದಂತಾಗುತ್ತದೆ. ಸೋಮಣ್ಣ ಅವರು ವರುಣಾದಲ್ಲಿ ಸೋತ ನಂತರ ಕಾರ್ಯಕರ್ತರನ್ನು ನಿಂದಿಸಿದ್ದಾರೆ. ಒಂದು ಮತಕ್ಕೆ 2000 ರೂ. ನೀಡಿ ಮತದಾರರನ್ನು ಭ್ರಷ್ಟಾಚಾರಿಗಳಾಗಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಸೋಮಣ್ಣ ತಮ್ಮ ಸ್ವಯಂಕೃತ ಅಪರಾಧದಿಂದ ಸೋಲನ್ನು ಅನುಭವಿಸಿದರು. ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡಿದ್ದು ಅವರ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಮ್ಮೆ ಅಧ್ಯಕ್ಷರಾದವರು ಮೂರು ವರ್ಷಗಳವರೆಗೆ ಇರುತ್ತಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಅವಧಿ ಇನ್ನು ಮುಗಿದಿಲ್ಲ. ಅವಧಿಗೂ ಮುನ್ನ ವಿಜಯೇಂದ್ರ ಬದಲಾವಣೆ ಸಾಧ್ಯವಿಲ್ಲ. ಬದಲಾವಣೆ ಮಾಡಿದರೆ ಶ್ರೀರಾಮಲು ಅಥವಾ ತೇಜಸ್ವಿನಿ ರಾಜ್ಯಾಧ್ಯಕ್ಷರಾಗಲಿ ಎಂದು ಮೈಸೂರಿನ ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular