ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ.
ಮೃತರನ್ನು ಸೀಬೇಗೌಡ, ಶೋಭಾ, ದುಂಬಿಶ್ರೀ ಮತ್ತು ಭಾನು ಕಿರಣ್ ಗೌಡ ಎಂದು ಗುರುತಿಸಲಾಗಿದೆ. ಮಗನನ್ನು ಹಾಸ್ಟೆಲ್ ಗೆ ಬಿಟ್ಟು ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೃತರು ರಾಮನಗರದ ಮಾಗಡಿ ತಾಲೂಕಿನ ಮತ್ತಿಕೆರೆಯವರು. ಯೂಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ.ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

