ಬೆಂಗಳೂರು : ರಾಜ್ಯದ ಎಲ್ಲಾ ಸೌರ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.
ರಾಜ್ಯದ ಎಲ್ಲಾ ಸೌರ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಸಂಗ್ರಹಿಸಿ ಅಗತ್ಯವಿದ್ದಾಗ ಪೂರೈಸಲು ಅನುಕೂಲವಾಗುತ್ತದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

