ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಲೇಪಾಕ್ಷಿ (51) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಧಿಡೀರನೇ ಲೇಪಾಕ್ಷಿ ನನಗೆ ಸುಸ್ತು ಆಗುತ್ತಿದೆ ಎಂದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ. ಹಾಸನದಲ್ಲಿ 40 ದಿನಗಳಲ್ಲಿ 19 ಮಂದಿ ಬಲಿಯಾಗಿದ್ದಾರೆ. ಸರಣಿ ಸಾವಿನಿಂದ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.

