HomeLatest NewsBREAKING: ರಾಜ್ಯದಲ್ಲಿ 'ಮೈಕ್ರೋ ಫೈನಾನ್ಸ್ ' ಕಿರುಕುಳಕ್ಕೆ ಮತ್ತೊಂದು ಬಲಿ :  ಸೆಲ್ಪಿ ವಿಡಿಯೋ ಮಾಡಿಟ್ಟು...

BREAKING: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್ ‘ ಕಿರುಕುಳಕ್ಕೆ ಮತ್ತೊಂದು ಬಲಿ :  ಸೆಲ್ಪಿ ವಿಡಿಯೋ ಮಾಡಿಟ್ಟು ವ್ಯಕ್ತಿ ಸೂಸೈಡ್.!

ದೇವನಹಳ್ಳಿ: ರಾಜ್ಯದಲ್ಲಿ ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ, ಆತ್ಮಹತ್ಯೆ ಪ್ರಕರಣಗಳು ಇನ್ನೂ ನಿಂತಿಲ್ಲ. ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಗೋಕರೆ ಗ್ರಾಮದಲ್ಲಿ ನಡೆದಿದೆ.

ಸುಬ್ರಹ್ಮಣಿ (38) ಮೃತ ದುರ್ದೈವಿ. ಜನ ಫೈನಾನ್ಸ್ ಕಂಪನಿ ವಿರುದ್ಧ ಆರೋಪ ಮಾಡಿ ಸೆಲ್ಫಿ ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಬ್ರಹ್ಮಣಿ ಜನ ಫೈನಾನ್ಸ್ ಬ್ಯಾಂಕ್ ನಲ್ಲಿ 5 ಲಕ್ಷ ರೂಪಾಯಿ ಸಾಲ ಪಡೆದಿದ್ದರಂತೆ. ಇತ್ತೀಚೆಗೆ ಕಂತು ಡ್ಯೂ ಇದ್ದಿದ್ದಕ್ಕೆ ಬ್ಯಾಂಕ್ ನಿಂದ ನೋಟಿಸ್ ಬಂದಿತ್ತಂತೆ. ಮನೆ ಜಪ್ತಿ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆಯೊಡ್ಡಿದ್ದರಂತೆ. ಇದರಿಂದ ಮನನೊಂದ ಸುಬ್ರಹ್ಮಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಟುಂಬ ಸದಸ್ಯರು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದದರೆ.

For Latest News Updates, Join Our Whatsapp Community🚩
RELATED ARTICLES

Most Popular