HomeLatest Newsಕಾನೂನು ರೀತಿಯಲ್ಲಿ ಮರಳು, ಕೆಂಪು ಕಲ್ಲು ಗಣಿಗಾರಿಕೆಗೆ ಅವಕಾಶ: ಸಚಿವ ದಿನೇಶ್ ಗುಂಡೂರಾವ್

ಕಾನೂನು ರೀತಿಯಲ್ಲಿ ಮರಳು, ಕೆಂಪು ಕಲ್ಲು ಗಣಿಗಾರಿಕೆಗೆ ಅವಕಾಶ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯ ಆರಂಭದಲ್ಲಿ ಶಾಸಕರು, ಜಿಲ್ಲೆಯಲ್ಲಿ ಮನೆ ನಿರ್ಮಾಣ ಸೇರಿದಂತೆ ಬಡ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿರುವ ಕುರಿತು ಪ್ರಸ್ತಾಪಿಸಿ ಸಕ್ರಮ ಮರಳು ಗಣಿಗಾರಿಕೆ ಮತ್ತು ಕೆಂಪು ಕಲ್ಲು ತೆಗೆಯಲು ಅವಕಾಶ ನೀಡುವಂತೆ ಒತ್ತಾಯಿಸಿದಾಗ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಸಭೆ ನಡೆಯುವ ಮೊದಲು ದಕ್ಷಿಣ ಕನ್ನಡ ಡಿಸಿ ಅವರು ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ಅಭಾವದ ಬಗ್ಗೆ ಸಭೆ ನಡೆಸಲಿ. ಮರಳು ಮತ್ತು ಕೆಂಪು ಕಲ್ಲು ತೆಗೆಯಲು ಮರು ಟೆಂಡರ್ ಮಾಡುವ ಬ್ಲಾಕ್ ಗಳ ಪರವಾನಿಗೆ ಪಟ್ಟಿಯನ್ನು ಒಳಗೊಂಡಂತೆ ವರದಿ ಸಲ್ಲಿಸಬೇಕು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಆಯುಕ್ತರೊಂದಿಗೆ ಉನ್ನತ ಮಟ್ಟದ ಸಭೆಯಲ್ಲಿ ಮರಳು ಮತ್ತು ಕೆಂಪು ಕಲ್ಲು ತೆಗೆಯುವ ಕಾನೂನು ಪ್ರಕ್ರಿಯೆಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular