HomeLatest NewsBREAKING: 5 ಹುಲಿ ಸಾವಿನ ಪ್ರಕರಣದಲ್ಲಿ ಲೋಪ: ಅರಣ್ಯ ಇಲಾಖೆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ...

BREAKING: 5 ಹುಲಿ ಸಾವಿನ ಪ್ರಕರಣದಲ್ಲಿ ಲೋಪ: ಅರಣ್ಯ ಇಲಾಖೆ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

ಬೆಂಗಳೂರು: ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆಯ ಶಿಕ್ಷೆ ನೀಡಲಾಗಿದೆ. ಅಧಿಕಾರಿಗಳಾದ ಚಕ್ರಪಾಣಿ, ಗಜಾನನ ಹೆಗಡೆ, ಮಾದೇಶ ಅವರಿಗೆ ಕಡ್ಡಾಯ ರಜೆ ನೀಡಲಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ, ಹನೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ, ಉಪವಲಯ ಅರಣ್ಯಾಧಿಕಾರಿ ಮಾದೇಶ್ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಲೋಪ ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಹುಲಿಗಳು ಮೃತಪಟ್ಟಿದ್ದವು. ಗಸ್ತು ಚೆಕ್ ಪೋಸ್ಟ್ ನಿಂದ ಕೇವಲ 800 ಮೀಟರ್ ದೂರದಲ್ಲಿ ಘಟನೆ ನಡೆದಿತ್ತು. ಘಟನೆ ನಡೆದು ಎರಡು ದಿನಗಳಾದರೂ ಅಧಿಕಾರಿಗಳ ಗಮನಕ್ಕೆ ಬಾರದ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳನ್ನು ಕಡ್ಡಾಯ ರಜೆಯ ಮೇಲೆ ರಾಜ್ಯ ಸರ್ಕಾರ ಕಳುಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular