ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ನಗದುರಹಿತ ವೈದ್ಯಕೀಯ ಸೌಲಭ್ಯಕ್ಕೆ ಕ್ರಮ

ಬೆಂಗಳೂರು: ನಿವೃತ್ತ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದ್ದು, ಸದರಿ ಪ್ರಸ್ತಾವನೆಯಲ್ಲಿರುವ ವಿಷಯಗಳ ಪರಿಶೀಲನೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ.

ರಾಜ್ಯ ಸರ್ಕಾರವು ಈ ವರ್ಷ ಈಗಾಗಲೇ ಸೇವೆಯಲ್ಲಿರುವ ಅಧಿಕಾರಿಗಳಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯನ್ನು ಕಾರ್ಯಗತಗೊಳಿಸಲು ಸೂಚಿಸಿದೆ. ಈ ಯೋಜನೆಯನ್ನು ನಿರ್ವಹಿಸಲು ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹಾಗೂ ನೌಕರರ ಅವಲಂಬಿತ ಕುಟುಂಬ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಕ್ರಿಯೆ ಮುಕ್ತಾಯವಾದ ನಂತರ ತಮ್ಮ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದು ಆರ್ಥಿಕ ಇಲಾಖೆ ಹಿಂಬರಹ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read