ಬೆಂಗಳೂರು: ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ.
ಐಸಿಯುನಲ್ಲಿದ್ದ 5 ರೋಗಿಗಳು ಸೇರಿದಂತೆ 26 ರೋಗಿಗಳು ಸೇಫ್ ಆಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ರೋಗಿಗಳನ್ನು ಹೆಚ್. ಬ್ಲಾಕ್ ಗೆ ಶಿಫ್ಟ್ ಮಾಡಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.