BREAKING : ಗಡಿ ಉಸ್ತುವಾರಿ ಸಚಿವರಾಗಿ ಹೆಚ್.ಕೆ ಪಾಟೀಲ್ ನೇಮಕ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಗಡಿ ಉಸ್ತುವಾರಿ ಸಚಿವರಾಗಿ ಹೆಚ್.ಕೆ ಪಾಟೀಲ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ ಗಡಿ ಹಾಗೂ ನದಿಗಳಿಗೆ ಸಂಬಂಧಿಸಿದ ವಿವಾದಗಳ ಬಗ್ಗೆ ನಿರಂತರ ನಿಗಾವಹಿಸಿ, ಕಾನೂನಾತ್ಮಕವಾಗಿ ಮತ್ತು ರಾಜಕೀಯ ನೆಲೆಗಟ್ಟಿನಲ್ಲಿ ಪರಿಶೀಲಿಸಿ ಸಮಯೋಚಿತ ಅವಶ್ಯಕ ಕ್ರಮ ತೆಗೆದುಕೊಳ್ಳಲು ಸಹಾಯಕವಾಗುವಂತೆ ಸಚಿವರೊಬ್ಬರಿಗೆ ವಹಿಸಲು ಸರ್ಕಾರವು ನಿರ್ದರಿಸಿದೆ. ಆದ್ದರಿಂದ ಈ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಹಾಗೂ ನದಿಗಳಿಗೆ ಸಂಬಂಧಿಸಿದ ವಿವಾದಗಳ ವಿಷಯದ ಬಗ್ಗೆ ನಿರಂತರವಾಗಿ ಪರಿವೀಕ್ಷಿಸಲು ಶ್ರೀ ಹೆಚ್.ಕೆ. ಪಾಟೀಲ್, ಮಾನ್ಯ ಕಾನೂನು, ನ್ಯಾಯ ಶಾಸನ ರಚನೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರು, ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವಹಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read