ಬೆಂಗಳೂರು : ಹಗಲಿರುಳೆನ್ನದೆ ಜನರ ಪ್ರಾಣ ರಕ್ಷಣೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮ್ಯ್ಯ ಟ್ವೀಟ್ ಮಾಡಿದ್ದಾರೆ.
ತನ್ನಲಿಗೆ ಬರುವ ರೋಗಿ ಬಡವನೋ, ಶ್ರೀಮಂತನೋ, ಕೆಳ ಜಾತಿಯವನೋ, ಮೇಲ್ಜಾತಿಯವನೋ ಎಂಬ ಯಾವ ಪೂರ್ವಾಗ್ರಹಗಳಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ, ಅದೇ ಕಾಳಜಿಯಿಂದ ಆರೈಕೆ ಮಾಡುವ ವೈದ್ಯರೇ ಕಣ್ಣಿಗೆ ಕಾಣುವ ದೇವರಿದ್ದಂತೆ.
ಕೋವಿಡ್ ಸಾಂಕ್ರಾಮಿಕದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಲಕ್ಷಾಂತರ ಜನರಿಗೆ ಪುನರ್ಜನ್ಮ ನೀಡಿದ ವೈದ್ಯರ ಸೇವೆಯನ್ನು ಈ ದಿನ ನಾವೆಲ್ಲರೂ ಸ್ಮರಿಸಲೇಬೇಕು. ಹಗಲಿರುಳೆನ್ನದೆ ಜನರ ಪ್ರಾಣ ರಕ್ಷಣೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
You Might Also Like
TAGGED:ವೈದ್ಯರ ದಿನ'